ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2024-25 ನೇ ಸಾಲಿಗೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪ್ರಥಮ ಸೆಮಿಷ್ಟರ್ ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳಿಗೆ ಪ್ರಾಂಶುಪಾಲರ ಹಂತದಲ್ಲಿಯೇ ಮೇರಿಟ್ ಹಾಗೂ ರೋಸ್ಟರ್‍ಗನುಗುಣವಾಗಿ ಮೇ 17 ರಿಂದ 30ರವರೆಗೆ ಅರ್ಜಿ ಸಲ್ಲಿಸುವುದು.


ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.35 ಅಂಕಗಳೊಂದಿಗೆ ಉತ್ತೀರ್ಣರಾದವರಿಗೆ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್-60 ಸೀಟುಗಳು, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್-63 ಸೀಟುಗಳು, ಕಮರ್ಷಿಯಲ್ ಪ್ರಾಕ್ಟಿಸ್ ಕನ್ನಡ (31ಸೀಟುಗಳು) ಮತ್ತು ಇಂಗ್ಲೀಷ್ (32 ಸೀಟುಗಳು), ಅಪರೇಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ (63 ಸೀಟುಗಳು) ಕೋರ್ಸ್‍ಗಳಿಗೆ ಸೀಟು ಹಂಚಿಕೆ ಮಾಡಲಾಗುವುದು.

ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್‍ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ ಕ್ಷೇತ್ರ ಶಿಕ್ಷಣಾಧಿಕಾರಿಗಳವರ ದೃಢೀಕರಿಸಿದ ಸಹಿಯೊಂದಿಗೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 04 ಭಾವಚಿತ್ರವನ್ನು ಸಲ್ಲಿಸಬೇಕು.
ದಿನಾಂಕ: 30-05-2024 ರೊಳಗಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯುವಂತೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗೆ ರವಿನಾಯ್ಕ.ಡಿ, ಪ್ರಾಂಶುಪಾಲರು ಮೊ.ಸಂ: 9886610245 ನ್ನು ಸಂಪರ್ಕಿಸುವುದು.

ವರದಿ ಪ್ರಜಾ ಶಕ್ತಿ