ಬೆಂಗಳೂರು ಮೇ 21: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಹಾಗೂ 2018ರ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಎಂ ರಮೇಶ್ ಶೆಟ್ಟಿ ಇವರನ್ನು ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಉಸ್ತುವಾರಿಯನ್ನಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಇವರು ನೇಮಕ ಮಾಡಿದ್ದಾರೆ.

ಈ ಆದೇಶವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ ಸಿ ಚಂದ್ರಶೇಖರ್ ಇವರು ಹೊರಡಿಸಿ, ಆದೇಶದಲ್ಲಿ ಈ ಕೂಡಲೇ ಉಸ್ತುವಾರಿಯ ಜವಾಬ್ದಾರಿಯನ್ನು ತೆಗೆದುಕೊಂಡು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳಾದ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಆಯನೂರು ಮಂಜುನಾಥ್ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಡಾ ಕೆ.ಕೆ. ಮಂಜುನಾಥ್ ಇವರನ್ನು ಗೆಲ್ಲಿಸುವಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ. ರಮೇಶ್ ರವರು ಈ ಹಿಂದೆ 2018ರ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವುದನ್ನು ಗಮನಿಸಬಹುದಾಗಿದೆ. ಅವರು 6 ಜಿಲ್ಲೆಗಳಲ್ಲಿ ಇರುವ ಪದವೀಧರರು ಮತ್ತು ಶಿಕ್ಷಕರಲ್ಲಿ ನಿರಂತರ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಈ ನೇಮಕಾತಿ ಮಾಡಲಾಗಿದೆ.