ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಬಿಜೆಪಿ ಭದ್ರಾವತಿ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ನೈರುತ್ಯ ಪದವೀದರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಘಟನಾಯಕರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮುಂಬರುವ ಚುನಾವಣೆಯ ದೃಷ್ಟಿಯಿಂದ ಹಲವಾರು ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚೆ ನಡೆಸಿ, ನಮ್ಮ ಅಭ್ಯರ್ಥಿಯಾದ ಶ್ರೀಯುತ ಧನಂಜಯ್ ಸರ್ಜಿ ಅವರ ದಿಗ್ವಿಜಯಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ರುದ್ರಗೌಡರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಆನಂದ್, ಬಿಜೆಪಿ ಭದ್ರಾವತಿ ಅಧ್ಯಕ್ಷರಾದ ಧರ್ಮಪ್ರಸಾದ್, ಪ್ರಮುಖರಾದ ರಾಮಲಿಂಗಯ್ಯ, ರುದ್ರೇಶ್, ಚುನಾವಣೆಯ ಸಂಚಾಲಕರಾದ ಹರ್ಷ, ಸಹಸಂಚಾಲಕರಾದ ರಘುರಾಮ್ ಸೇರಿದಂತೆ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ