ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದ ಪಕ್ಷದ ಮುಖಂಡರುಗಳಾದ ಎಂ.ರಮೇಶ್ ಶೆಟ್ಟಿ ಹಾಗೂ ಎನ್ ರಂಗಸ್ವಾಮಿ ಗೌಡ ರವರು ಪಕ್ಷದ ವರಿಷ್ಠರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರ ಸೂಚನೆ ಮೇರೆಗೆ ನಾಮಪತ್ರ ಹಿಂಪಡೆದು ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಮಾನ್ಯ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಿ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡು ಅವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಶಾಂತವೀರನಾಯಕ್ ಚಾಮರಾಜ ಇನ್ನಿತರರು ಉಪಸ್ಥಿತರಿದ್ದರು.