ಶಿವಮೊಗ್ಗದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ಪದವೀಧರ ಹಾಗೂ ಶಿಕ್ಷಕರನ್ನು ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ಮಾಡಿ, ಪದವೀಧರ ಕ್ಷೇತ್ರದ ಅಭ್ಯರ್ಥಿ ಶ್ರೀಯುತ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಶ್ರೀಯುತ ಬೋಜೆ ಗೌಡ ಅವರ ಪರವಾಗಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರು, ಶಾಲೆ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ ವೃಂದದವರು ಹಾಗೂ ಬಿಜೆಪಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ