ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಶುಕ್ರವಾರ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು ಮತ್ತು ಮಾಜಿ ಸಚಿವರಾದ ದಿ. ಶ್ರೀ ಡಾ ವಿ. ಎಸ್. ಆಚಾರ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಅವರು ಜೀವನದಲ್ಲಿ ಭಾರತೀಯ ಜನತಾ ಪಕ್ಷಕ್ಕಾಗಿ ಮತ್ತು ಸಮಾಜದ ಏಳಿಗೆಗಾಗಿ ಹಗಲಿರುಳು ದುಡಿದಿದ್ದಾರೆ ಎಂದರು.

ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ , ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ