ಕರ್ನಾಟಕದಲ್ಲಿ ಬಿ.ಜೆ.ಪಿ ಪಕ್ಷದ ತವರು ಜಿಲ್ಲೆ ಎಂದೇ ಹೆಸರಾಗಿರುವ ಶಿವಮೊಗ್ಗ ಜಿಲ್ಲೆಯ ಸನ್ಮಾನ್ಯ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿ ಯಾಗಿ ಸನ್ಮಾನ್ಯ ಬಸವರಾಜ್ ಬೊಮ್ಮಾಯಿಯವರು ಅಧಿಕಾರಕ್ಕೆ ಬಂದಿದ್ದು, ನೂತನ ಸರಕಾರದಲ್ಲಿ ಬಿ.ಜೆ.ಪಿಯ ತವರು ಜಿಲ್ಲೆಯ ಶಾಸಕರು ಹಾಗೂ ಮಾಜಿ ಸಚಿವರು, ಉಪ ಮುಖ್ಯಮಂತ್ರಿಗಳು, ಆದ ಕೆ.ಎಸ್ ಈಶ್ವರಪ್ಪರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಸಾವಿರಾರು ಕೋಟಿ ರೂಗಳ ವಿಮಾನನಿಲ್ದಾಣ, ಹೆದ್ದಾರಿಗಳು, ಸೇತುವೆ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳಿಗೆ ಮತ್ತಷ್ಟು ವ ನೀಡಬೇಕು. ಅದೇ ರೀತಿಯಲ್ಲಿ 4ಬಾರಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಶಾಸಕರಾಗಿ, ಸಭಾಧ್ಯಕ್ಷರಾಗಿ ಕೆಲಸ ಮಾಡಿದ ಅನುಭವವಿರುವವರಿಗೆ ಸಚಿವ ಸ್ಥಾನ ನೀಡಬೇಕೆಂದು ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಒಕ್ಕೂಟ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರದ ಬಿಜೆಪಿ ಮುಖಂಡರುಗಳಿಗೆ ಮಾಧ್ಯಮಗಳ ಮೂಲಕ ಬಹಿರಂಗವಾಗಿ ಒತ್ತಾಯಿಸುತ್ತದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALS & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153