ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಇಂಡೆವೊರ್ ಸಾಫ್ಟ್ -ಟೆಕ್ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಆಡಳಿತ ವರ್ಗ , ಸಿಬ್ಬಂದಿ ವರ್ಗದವರಲ್ಲಿ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಲಾಯಿತು.
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.