ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ , ಮಹಾ ಶಕ್ತಿ ಕೇಂದ್ರದ ಪ್ರಮುಖರ ಸಭೆಯನ್ನು ಆಯೋಜಿಸಲಾಗಿತ್ತು.
ಈ ವೇಳೆ ಈ ವೇಳೆ ಕಾಪು ವಿಧಾನಸಭಾ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಬಿಜೆಪಿ ಕಾರ್ಯಕರ್ತರು , ವಾರ್ಡ್ ಅಧ್ಯಕ್ಷರು ಮತ್ತು ಮಹಾ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.