ಶಿವಮೊಗ್ಗ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯುವ ಜಿಲ್ಲೆಯ ರೈತರ ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ “ತುರ್ತು ವಾಹನ ಸೇವೆ” (ಅಂಬ್ಯುಲೆನ್ಸ್) ಆರಂಭಿಸಿದ್ದು, ಪಶುಚಿಕಿತ್ಸಾಲಯ ಲಭ್ಯವಿಲ್ಲದ ಗ್ರಾಮಗಳ ರೈತರು ಜಾನುವಾರುಗಳ ತುರ್ತು ಚಿಕಿತ್ಸೆ ಅವಶ್ಯವಿದ್ದಲ್ಲಿ ಸಹಾಯವಾಣಿ ಸಂಖ್ಯೆ 1962ಕ್ಕೆ ಕರೆಮಾಡಿ ಈ ಸೇವೆ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.