ಶಿವಮೊಗ್ಗದ ಜವಹರಲಾಲ್ ನೆಹರು ಎಂಜಿನಿಯರಿಂಗ್ ಕಾಲೇಜಿಲ್ಲಿ ಶುಕ್ರವಾರ ನೈರುತ್ಯ ಪದವೀಧರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು, ಉಪನ್ಯಾಸಕರು, ಆಡಳಿತ ವರ್ಗ ಮತ್ತು ಸಿಬ್ಬಂದಿಗಳಲ್ಲಿ ಮತಯಾಚಿಸಿದರು.
ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ವೈ.ವಿಜಯ ಕುಮಾರ್, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ, ಗ್ರಾಮಾಂತರ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲತೇಶ್ ಮತ್ತಿತರರು ಹಾಜರಿದ್ದರು.