ಶಿವಮೊಗ್ಗ ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಾಲಯ ಹಾಗೂ ಶ್ರೀ ರಾಘವೇಂದ್ರ ಸ್ವಾಮಿ ಮಠ, ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸರ್ಜಿ ಅಭಿಮಾನಿ ಬಳಗದ ವತಿಯಿಂದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರ ಗೆಲುವಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಮಹಾನಗರ ಪಾಲಿಕೆ ಸದಸ್ಯ ಪ್ರಭಾಕರ್, ಯುವ ಮುಖಂಡ ವರುಣ್ ಸೇರಿದಂತೆ ಅಭಿಮಾನಿಗಳು ಪಾಲ್ಗೊಂಡಿದ್ದರು.

ವರದಿ ಪ್ರಜಾ ಶಕ್ತಿ