ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ಮಂಡಲ ಬಿಜೆಪಿ ಕಚೇರಿಯಲ್ಲಿ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು.
ಈ ವೇಳೆ ನೈರುತ್ಯ ಪದವಿಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ, ಮಾಜಿ ಸಚಿವರಾದ ಡಿ ಎನ್ ಜೀವರಾಜ್, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ,ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ ಎಚ್ ಮಾಲತೇಶ್, ಕೊಪ್ಪ ಮಂಡಲ ಬಿಜೆಪಿ ಅಧ್ಯಕ್ಷರಾದ ದಿನೇಶ್ ಹೊಸೂರು, ಕಾರ್ಯದರ್ಶಿಗಳಾದ ಬಿಸೇಜ್ ಭಟ್, ಜಿಲ್ಲಾ ಉಪಾಧ್ಯಕ್ಷರಾದ ಜಿ ಎಸ್ ಮಹಾಬಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪುಣ್ಯಪಾಲ್, ಡಿ ಸಿ ಸಿ ಬ್ಯಾಂಕ್ ನಿರ್ದೇಶಕರಾದ ಎಸ್ ಎನ್ ರಾಮಸ್ವಾಮಿ, ಜಿಲ್ಲಾ ಕಾರ್ಯದರ್ಶಿಗಳಾದ ಬಿ ಎಸ್ ನಟೇಶ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ರುತಿ ರೋಹಿತ್, ಚುನಾವಣಾ ತಾಲೂಕು ಸಂಚಾಲಕರಾದ ಮಂಜುನಾಥ್ ಹೊಸೂರು, ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.