ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಶೆಟ್ಟಿಗಳಕೊಪ್ಪ ಗ್ರಾಮದ ವಾಸಿ ಶಿವಪ್ಪ ಹೆಗಡೆ ರವರ ವಾಸದ ಮನೆಯ ಕಿಟಕಿಯನ್ನು ಮುರಿದು
ಬೆಳ್ಳಿ ಮತ್ತು ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 00492024 ಕಲಂ 454, 380 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಪ್ರಕರಣದಲ್ಲಿ ಆರೋಪಿತರು ಮತ್ತು ಕಳುವಾದ ಮಾಲಿನ ಪತ್ತೆಗಾಗಿ ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶ್ರೀ ಎ ಜಿ ಕಾರ್ಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರವರ ಮಾರ್ಗದರ್ಶನದಲ್ಲಿ,
ಶ್ರೀ ಗಜಾನನ ವಾಮನ ಸುತಾರ ಪೊಲೀಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪವಿಭಾಗ ಮತ್ತು ಶ್ರೀಧರ ಕೆ ವೃತ್ತ ನಿರೀಕ್ಷಕರು ಮಾಳೂರು ವೃತ್ತ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ರಂಗನಾಥ ಅಂತರಗಟ್ಟಿ ಪಿಎಸ್ ಐ – 1 ಆಗುಂಬೆ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಶ್ರೀ ಬಸವರಾಜ್ ಎಲ್ ಆರ್ ಪಿಎಸ್ ಐ 2 ಆಗುಂಬೆ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.
ಸದರಿ ತನಿಖಾ ತಂಡವು ಪ್ರಕರಣ ದಾಖಲಾದ ಕೇವಲ 24 ಗಂಟೆಗಳ ಒಳಗಾಗಿ ಪ್ರಕರಣವನ್ನು ಹಚ್ಚಿ, ಪ್ರಕರಣದ ಆರೋಪಿತರಾದ 1) ಮಂಜುನಾಥ @ ಕೊಪ್ಪ ಮಂಜ, 42 ವರ್ಷ, ಎಂ ಕೆ ಬೈಲು, ಕೈಮರ್, ತೂರ್ಥಹಳ್ಳಿ ಮತ್ತು 2) ಚೇತನ್ @ ಚೇತು, 27 ವರ್ಷ, ಕೈಮರ, ತೀರ್ಥಹಳ್ಳಿ ರವರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಅಂದಾಜು ಮೌಲ್ಯ 1,50,500 /- ರೂಗಳ ಒಟ್ಟು 23.5 ಗ್ರಾಂ ತೂಕದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.
ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.