ವಿಶ್ವ ಪರಿಸರ ದಿನದ ಅಂಗವಾಗಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಸಲಾಗುತ್ತಿರುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮ ಮುಗಿದ ನಂತರ ಶಿವಮೊಗ್ಗ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಗಿಡವನ್ನು ನೆಡುವ ಮುಖಾಂತರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಪ್ರಕಾಶ್ ಪೊಲೀಸ್ ಉಪಾಧೀಕ್ಷಕರು, ಡಿಎಆರ್ ಶಿವಮೊಗ್ಗ ಮತ್ತು ಶಿವಮೊಗ್ಗ ನಗರದ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಇದೇ ರೀತಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ, ವೃತ್ತ ಕಛೇರಿ ಮತ್ತು ಉಪ ವಿಭಾಗ ಕಛೇರಿಗಳಲ್ಲಿ, ಆಯಾ ಡಿಎಸ್.ಪಿ, ಸಿಪಿಐ/ಪಿಐ, ಪಿಎಸ್ಐ ರವರುಗಳು ಮತ್ತು ಪೊಲೀಸ್ ಸಿಬ್ಬಂಧಿಗಳು ಠಾಣಾ ಮತ್ತು ಕಛೇರಿಗಳ ಆವರಣದಲ್ಲಿ ಗಿಡಗಳನ್ನು ನಡೆವ ಮುಖಾಂತರ ವಿಶ್ವ ಪರಿಸರ ದಿನವನ್ನು ಆಚರಿಸಿರುತ್ತಾರೆ.
ಹಸಿರೇ ನಮ್ಮೆಲ್ಲರ ಉಸಿರು, ಕಾಡು ಬೆಳಸಿ ನಾಡು ಉಳಿಸುವ ಸಂಕಲ್ಪ ಮಾಡೋಣ ಎಂದು ಹೇಳಿದರು.