ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರನ್ನು ಕಾರ್ಯಕರ್ತರು ಶಿವಮೊಗ್ಗದಲ್ಲಿ ಶುಕ್ರವಾರ ಸಂಜೆ ಅದ್ಧೂರಿಯಾಗಿ ಸ್ವಾಗತಿಸಿ, ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದರು.
ಮೈಸೂರಿನಲ್ಲಿ ಮತ ಎಣಿಕೆ ನಡೆಸಲಾಗಿತ್ತು. ಗೆಲುವು ಸಾಧಿಸಿದ ಬಳಿಕ ಶುಕ್ರವಾರ ಸಂಜೆ ಡಾ. ಧನಂಜಯ ಸರ್ಜಿ ಶಿವಮೊಗ್ಗಕ್ಕೆ ಮರಳಿದರು. ನಗರಕ್ಕೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಡಾ. ಧನಂಜಯ ಸರ್ಜಿ ಅವರಿಗೆ ಹಾರ ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸ್ವಾಗತಿಸಿದರು.
ಬೆಕ್ಕಿನಕಲ್ಮಠದ ಮುಂಭಾಗದಿಂದ ಬಿಜೆಪಿ ಕಚೇರಿವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಹಿರಿಯ ಹಾಗೂ ಯುವ ಮುಖಂಡರು, ನೂರಾರು ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.ಈ ವೇಳೆ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಗ್ರಾಮಾಂತರ ಸಂಚಾಲಕ ವಿರೂಪಾಕ್ಷಪ್ಪ ಸೇರಿದಂತೆ ಮುಖಂಡರು ಭಾಗವಹಿಸಿದ್ದರು.