ಶಿವಮೊಗ್ಗ ಟೌನ್ ರಾಜೀವ್ ಗಾಂಧಿ ಬಡಾವಣೆಯ ಹತ್ತಿರ ಅಸಾಮಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ ಶ್ರೀ ತಿಪ್ಪೇ ಸ್ವಾಮಿ, ಪಿಐ ಸಿಇಎನ್ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂಧಿಗಳ ತಂಡವು ದಾಳಿ ನೆಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಬ್ದುಲ್ ಅಜೀಂ ಅರ್ಬಾಜ್, 19 ವರ್ಷ, ರಾಜೀವ್ ಗಾಂಧಿ ಬಡಾವಣೆ ಶಿವಮೊಗ್ಗ ಟೌನ್ ಈತನನ್ನು ವಶಕ್ಕೆ ಪಡೆದು, ಆರೋಪಿತನಿಂದ ಅಂದಾಜು ಮೌಲ್ಯ 18,000/- ರೂಗಳ 375 ಗ್ರಾಂ ತೂಕದ ಒಣ ಗಾಂಜಾವನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತನ ವಿರುದ್ಧ ಸಿಇಎನ್ ಕ್ರೈಂ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0062/2024 ಕಲಂ 20(b)(ii)(A) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.