ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ರಾಜ್ಯಮಟ್ಟದ ೧೯ ನೆಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ ೧೧ ರಂದು ಮಂಗಳವಾರ ಏರ್ಪಡಿಸಲಾಗಿತ್ತು.

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಇವರ ನೇತೃತ್ವದಲ್ಲಿ ನಡೆಯಿತು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಪ್ರಸನ್ನನಾಥ ಸ್ವಾಮೀಜಿ ಸಮ್ಮುಖದಲ್ಲಿ ಕು. ಮಾನ್ವಿ ಕರೂರು ಅವರ ಸರ್ವಾಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲೆಯ ಕು. ಪವಿತ್ರ ದೇವಾಡಿಗ ಉದ್ಘಾಟಿಸಿದರು.

ಕಸಾಪ, ಕಸಾಸಾಂ ವೇದಿಕೆ ಅಧ್ಯಕ್ಷರಾದ ಡಿ. ಮಂಜುನಾಥ, ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆ ಕಾರ್ಯದರ್ಶಿಗಳಾದ ಶ್ರೀಮತಿ ಶೋಭಾ ವೆಂಕಟರಮಣ, ಅನನ್ಯ ಶಿಕ್ಷಣ ಸಂಸ್ಥೆ ಸಂಸ್ಥಾಪಕರಾದ ಅನನ್ಯ ಗಿರೀಶ್, ಬಿಜಿಎಸ್ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಡಿ. ವಿ. ಸತೀಶ್, ಕಸಾಸಾಂ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾದ ಭಾರತಿ ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿ ಭೈರಾಪುರ ಶಿವಪ್ಪಗೌಡ, ವಿವಿಧ ತಾಲ್ಲೂಕು ಅಧ್ಯಕ್ಷರಾದ ಭದ್ರಾವತಿ ಸುಧಾಮಣಿ, ಸಾಗರದ ಕಸ್ತೂರಿ ಸಾಗರ್, ಸೊರಬದ ಶಂಕರ್ ಶೇಟ್, ಹೊಸನಗರದ ರಾಘವೇಂದ್ರ ನಗರ, ಕಾಸಾಪ ತಾಲ್ಲೂಕು ಅಧ್ಯಕ್ಷರಾದ ಶಿವಮೊಗ್ಗ ಮಹಾದೇವಿ, ಭದ್ರಾವತಿಯ ಕೋಡ್ಲು ಯಜ್ಞಯ್ಯ, ತೀರ್ಥಹಳ್ಳಿ ಟಿ. ಕೆ. ರಮೇಶ್ ಶೆಟ್ಟಿ, ಸಾಗರದ ವಿ. ಟಿ. ಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ