ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜೂನ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಜೂ- 19 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ, ಜೂ. 20 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಜೂ-21 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ, ಜೂ. 24 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣದಲ್ಲಿ, ಜೂ-25 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ, ಜೂ. 26 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣ. ಜೂ-28 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.