ಶ್ರೀಮತಿ ಲತಾ ಬಿ. ಕೆ. ಸಿಪಿಐ, ಶಿವಮೊಗ್ಗ ಸಂಚಾರಿ ವೃತ್ತ ರವರು ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ಶಾಲಾ ವಾಹನಗಳ ತಪಾಸಣೆ ನಡೆಸಿ, ವಾಹನಗಳಲ್ಲಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕಿರುವ ದಾಖಲಾತಿಗಳಾದ ಆರ್.ಸಿ (ನೋಂದಣಿ ಪ್ರಮಾಣ ಪತ್ರ), ಇತ್ತೀಚಿನ ಎಮಿಷನ್ ಟೆಸ್ಟ್ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಿಮಾ ಪತ್ರ, ಡಿ.ಎಲ್ (ಚಾಲನಾ ಪರವಾನಿಗೆ), ಬ್ಯಾಡ್ಜ್ ಹಾಗೂ ಇತರ ದಾಖಲಾತಿಗಳನ್ನು ಮತ್ತು ವಾಹನದಲ್ಲಿ ಪ್ರಥಮಾ ಚಿಕಿತ್ಸಾ ಪೆಟ್ಟಿಗೆ ಇಟ್ಟುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಲಾಯಿತು.
ನಂತರ ಚಾಲಕರುಗಳಿಗೆ ಸಂಚಾರ ನಿಯಮಗಳ ಪಾಲನೆಯ ಮಹತ್ವದ ಬಗ್ಗೆ ಮಾಹಿತಿ ನೀಡಿ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡದೇ ಕಡ್ಡಾಯವಾಗಿ ವೇಗದ ಮಿತಿಯಲ್ಲಿಯೇ ವಾಹನಗಳನ್ನು ಚಾಲನೆ ಮಾಡುವಂತೆ, ಚಾಲನೆಯ ವೇಳೆ ಮಧ್ಯಪಾನ ಮಾಡಿ ವಾಹನ ಮಾಡದಂತೆ, ವಾಹನಗಳನ್ನು ಓಡಿಸುವಾಗ ಮೊಬೈಲ್ ಫೋನ್ ಬಳಕೆ ಮಾಡದಂತೆ ಮತ್ತು ಶಾಲಾ ವಾಹನದಲ್ಲಿ ಲಭ್ಯವಿರುವ ಆಸನಗಳಗಿಂತ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕೂರಿಸಿಕೊಂಡು ಹೋದಗಂತೆ ಸೂಚನೆಗಳನ್ನು ನೀಡಿದರು.