ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ರವರು ಹೃದಯಘಾತದಿಂದ ನಿಧನರಾಗಿದ್ದಾರೆ. ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಭಾಷಣ ನಂತರ ಅಸ್ವಸ್ಥರಾಗಿ ಆಸ್ಪತ್ರೆ ಸಾಗಿಸುವ ಮಧ್ಯೆ ಸಾವನಪ್ಪಿದ್ದರೆ.
ನಂತರ ಅವರ ಮನೆಯವರು ಕಣ್ಣುಗಳನ್ನು ಶಂಕರ ಕಣ್ಣಿನ ಆಸ್ಪತ್ರೆಗೆ ದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ನೇತ್ರದಾನ ಮಾಡಿದ ಅವರ ಕುಟುಂಬಕ್ಕೆ ಶಂಕರ ಕಣ್ಣಿನ ಆಸ್ಪತ್ರೆ ಆಡಳಿತ ಮಂಡಳಿ ಧನ್ಯವಾದ ತಿಳಿಸಿದ್ದಾರೆ.