ಶಿವಮೊಗ್ಗ ನಗರದ ಮಾಂಸಾಹಾರಿ ಫುಡ್ ಕೋರ್ಟ್ ನಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20 ತಿನಿಸು ಅಂಗಡಿಗಳಿಗೆ ನೋಟೀಸ್ ನೀಡಲಾಗಿದೆ.

ದಾಳಿಯ ವೇಳೆ ಎಲ್ಲಾ ಅಂಗಡಿಗಳು ಪರವಾನಗಿ ಇಲ್ಲದೆ ನಡೆಯುತ್ತಿರುವುದು, ಕಲರ್ ಪ್ಯಾಕೆಟ್ ದೊರೆತಿದೆ.ಅಲ್ಲಿನ ಸಿಬ್ಬಂದಿಗಳ ಸ್ವಚ್ಛತೆ ಕಾಣದೆ ಇರುವುದು ಅರ್ ಒ ವಾಟರ್ ಅಳವಡಿಸದೆ ಇರುವುದು ಗಮನಕ್ಕೆ ಬಂದಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಮೇಲಿನ ಅಂಶಗಳು ಮುಂದಿನ ದಿನಗಳಲ್ಲಿ ಬದಲಾವಣೆ ಆಗದೆ ಇದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರದಿ ಪ್ರಜಾ ಶಕ್ತಿ