ರಾಜ್ಯದ ಜನರ ಬದುಕನ್ನು ದುಸ್ತರವಾಗಿಸುತ್ತಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ ಜಿಲ್ಲಾ ಬಿಜೆಪಿ ವತಿಯಿಂದ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಅವೈಜ್ಞಾನಿಕ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಚುಕ್ಕಾಣಿ ಹಿಡಿದ ಭ್ರಷ್ಟ ಕಾಂಗ್ರೆಸ್ ಸರ್ಕಾರ ತನ್ನ ಖಜಾನೆಯನ್ನು ತುಂಬಿಸಿಕೊಳ್ಳಲು ಬೆಲೆ ಏರಿಕೆ ಗ್ಯಾರಂಟಿ ಪ್ರಾರಂಭಿಸಿದೆ. ತೈಲದರ ಏರಿಕೆ ಮಾಡಿ ಕನ್ನಡಿಗರಿಗೆ ಇಂಧನ ಬರೆ ಹಾಕಿರುವ ಕಾಂಗ್ರೆಸ್, ದಿನದಿಂದ ದಿನಕ್ಕೆ ಹೊಸ ಗ್ಯಾರೆಂಟಿಗಳೊಂದಿಗೆ ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ತರಕಾರಿ, ಹಣ್ಣು, ದಿನಸಿ ಸೇರಿದಂತೆ ದಿನಬಳಕೆಯ ವಸ್ತುಗಳ ಹಾಗೂ ಕುಡಿಯುವ ನೀರಿಗೂ ಸುಂಕ ಹೆಚ್ಚಿಸಿ ಕನ್ನಡಿಗರಿಗೆ ಮತ್ತಷ್ಟು ಬೆಲೆ ಏರಿಕೆಯ ಬರೆ ಹಾಕುವ ಮೂಲಕ ರಾಜ್ಯ ಹಾಗೂ ರಾಜ್ಯದ ಜನತೆಯನ್ನು ದಿವಾಳಿ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರಕ್ಕೆ ನನ್ನ ಧಿಕ್ಕಾರವಿರಲಿ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು.