ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರಲ್ಲಿ ರಾಜ್ಯದಿಂದ ನೂತನವಾಗಿ ಆಯ್ಕೆಯಾದ ಲೋಕಸಭಾ ಸದಸ್ಯರಿಗೆ ಹಾಗೂ ಕೇಂದ್ರ ಸಂಪುಟದಲ್ಲಿ ರಾಜ್ಯದಿಂದ ಮಂತ್ರಿಯಾಗಿ ನಿಯುಕ್ತಿಗೊಂಡ ನೂತನ ಸಚಿವರಿಗೆ “ಬಿಜೆಪಿ ಕರ್ನಾಟಕ” ಇಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗೌರವ ಪೂರ್ವಕ “ಅಭಿನಂದನಾ ಸಮಾರಂಭ” ದಲ್ಲಿ ಪಾಲ್ಗೊಂಡು ಪ್ರೀತಿ ಪೂರ್ವಕ ಸನ್ಮಾನ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ , ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ , ಕೇಂದ್ರದ ಸಚಿವರಾಗಿ ಆಯ್ಕೆಯಾದ ಶ್ರೀ ಪ್ರಹ್ಲಾದ್ ಜೋಶಿ , ಶ್ರೀ ಎಚ್.ಡಿ. ಕುಮಾರಸ್ವಾಮಿ , ಶ್ರೀ ವಿ.ಸೋಮಣ್ಣ , ಕು. ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು, ವಿಧಾನಸಭೆ ಹಾಗೂ ವಿಧಾನ ಪರಿಷತ್ ಶಾಸಕರು, ಹಿರಿಯರು, ಮುಖಂಡರು ಮತ್ತು ಗಣ್ಯರು ಉಪಸ್ಥಿತರಿದ್ದರು.