ಶಿವಮೊಗ್ಗ ಟೌನ್ ಓತಿಘಟ್ಟದಿಂದ ದುಮ್ಮಳ್ಳಿ ಕಡೆಗೆ ಹೋಗುವ ರಸ್ತೆಯ ಪಕ್ಕ ರುದ್ರಭೂಮಿಯ ಹತ್ತಿರ ಬೈಕ್ ನಿಲ್ಲಿಸಿಕೊಂಡು, ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ, ಶ್ರೀ ಬಾಬು ಆಂಜನಪ್ಪ, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಎ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ಮಂಜುನಾಥ್ ಬಿ, ಪಿಐ ಮತ್ತು ಶ್ರೀ ಸಿದ್ದಪ್ಪ, ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆ ರವನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ

ಆರೋಪಿ ನಾಗೇಶ ನಾಯ್ಕ, 29 ವರ್ಷ, ಲಕ್ಷ್ಮಿಪುರ ಹೊಸಳ್ಳಿ ತಾಂಡಾ, ಶಿವಮೊಗ್ಗ ಈತನನ್ನು ದಸ್ತಗಿರಿ ಮಾಡಿ, ಆರೋಪಿಯಿಂದ ಅಂದಾಜು ಮೌಲ್ಯ 88,560/- ರೂಗಳ 2 ಕೆಜಿ 214 ಗ್ರಾಂ ತೂಕದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತರ ವಿರುದ್ಧ ತುಂಗಾನಗರ ಕ್ರೈಂ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0322/2024 ಕಲಂ 20(b), 8(c) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

ವರದಿ ಪ್ರಜಾ ಶಕ್ತಿ