ಕನಕಶ್ರೀ ಚಾರಿಟಬಲ್ ಟ್ರಸ್ಟ್, ಬೆಂಗಳೂರು ಇವರ ವತಿಯಿಂದ 2023-24ನೇ ಸಾಲಿನಲ್ಲಿ SSLC ಹಾಗು PUC ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಅಂಕ ಗಳಿಸಿದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ದಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವನ್ನು ನಡೆಯಿತು.

ಧಾರವಾಡದ “ಶ್ರೀ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನ”ದಲ್ಲಿ ಕೆ ಎಸ್ ಈಶ್ವರಪ್ಪನವರು ಮಾಜಿ ಉಪ ಮುಖ್ಯಮಂತ್ರಿಗಳು ಉದ್ಘಾಟಿಸಿ ಸುಮಾರು 200 ಕ್ಕೂ ಹೆಚ್ಚು ಪ್ರತಿಭಾನ್ವಿತ ವಿದಾಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ॥ ಬಸವರಾಜ ದೇವರು, ಪೀಠಾಧ್ಯಕ್ಷರು, ಶ್ರೀ ರೇವಣಸಿದ್ದೇಶ್ವರ ಮಹಾಮಠ, ಮನಸೂರು, ದಾರವಾಡ. ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಲಕ್ಷ್ಮಣ ಚಿಂಗಳೆ, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ॥ ಮಲ್ಲಿಕಾ ಘಂಟಿ, ಮಾಜಿ ಸಂಸದರಾದ ಶ್ರೀ ಕೆ ವಿರುಪಾಕ್ಷಪ್ಪ, ಕರ್ನಾಟಕ ಪ್ರದೇಶ ಕುರುಬ ಸಂಘದ ನಿರ್ದೇಶಕರಾದ ಶ್ರೀ ದೇವರಾಜ ಕಂಬಳಿಯವರು ಹಾಗು ಸಂಘದ ಪದಾಧಿಕಾರಿಗಳು, ಸಮಾಜದ ಹಿರಿಯರು ಹಾಗು ಮುಖಂಡರುಗಳು ಬಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ