ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ, ಪೇಪರ್ ಟೌನ್ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ಮೆಗ್ಗಾನ್ ರಕ್ತ ಕೇಂದ್ರದ ಸಹಯೋಗದೊಂದಿಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಭಿರವನ್ನು ಹಮ್ಮಿಕೊಂಡಿದ್ದು, ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ, ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
1) ರಕ್ತದಾನ ಮಾಡುವುದು ಎಷ್ಟು ಅವಶ್ಯಕವೆಂದರೆ, ಇದರಿಂದ ತುರ್ತು ಪರಿಸ್ಥಿತಿಯಲ್ಲಿರುವ ವ್ಯಕ್ತಿಗೆ ಜೀವಧಾನ ಮಾಡುವುದಕ್ಕೆ ಸಮನಾಗಿರುತ್ತದೆ ಮತ್ತು ತುರ್ತು ಪರಿಸ್ಥಿತಿಗಳಾದ ಅಪಘಾತ, ಶಸ್ತ್ರ ಚಿಕಿತ್ಸೆ, ಗರ್ಭಿಣಿಯರಿಗೆ ಹಾಗೂ ಇತರೆ ವೈದ್ಯಕೀಯ ತುರ್ತು ಅವಶ್ಯಕತೆ ಇರುವ ವ್ಯಕ್ತಿಗೆ ಪ್ರಾಮಾಣಿಕವಾಗಿ ಸಹಾಯ ಮಾಡಿದಂತಾಗುತ್ತದೆ.
2) ನಿಯಮಿತವಾಗಿ ರಕ್ತದಾನ ಮಾಡುತ್ತಾ ಬಂದರೆ, ದೇಹದಲ್ಲಿ ಹೊಸ ರಕ್ತ ವೃಧ್ದಿಯಾಗಿ ನಮ್ಮ ಆರೋಗ್ಯವೂ ಸಹಾ ಉತ್ತಮವಾಗಿರುತ್ತದೆ ಮತ್ತು ಇನ್ನೊಂದು ಜೀವವನ್ನು ಉಳಿಸಿದ ಸಾರ್ಥಕತೆ ಸಹಾ ಸಿಗುತ್ತದೆ. ಈ ಮಾಹಿತಿಯನ್ನು ನಿಮ್ಮ ಪರಿಚಯಸ್ಥರು, ಕುಟುಂಬದವರು ಮತ್ತು ಸ್ನೇಹಿತರಿಗೂ ಸಹಾ ನೀಡಿ. ರಕ್ತದಾನ ಮಾಡಲು ಪ್ರೋತ್ಸಾಹಿಸಿ.
3) ರಕ್ತಕ್ಕೆ ಯಾವುದೇ ಮೇಲು ಕೀಳು ಹಾಗೂ ಬೇದ ಭಾವ ಇರುವುದಿಲ್ಲ. ಈ ವಿಚಾರದಲ್ಲಿ ಎಲ್ಲರೂ ಒಂದಾಗಿರೋಣ. ಎಲ್ಲರೂ ರಕ್ತದಾನ ಮಾಡುವ ಮೂಲಕ ನಿಶ್ಪಕ್ಷಪಾತವಾಗಿ ಅವಶ್ಯಕತೆ ಇರುವವರಿಗೆ ಸಹಾಯ ಮಾಡೋಣ.
4) ಪೊಲೀಸ್ ಇಲಾಖೆ ಈ ರೀತಿಯ ಕಾರ್ಯಕ್ರಮ ಆಯೋಜಿಸುವ ಮೂಲಕ ನಾವು ಸಮಾಜಕ್ಕೆ ಇನ್ನೂ ಹತ್ತಿರವಾಗಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಾಜ ಮುಖಿಯಾಗಿ ಕಾರ್ಯಮಾಡಲು ಸಾದ್ಯವಿರುತ್ತದೆ. ಮುಂದೆಯೂ ಕೂಡ ಪೊಲೀಸ್ ಇಲಾಖೆಯಿಂದ ಈ ರೀತಿಯ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಲಾಗುತ್ತದೆ. ಇಂತಹ ಒಳ್ಳೆಯ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆಯ ಸಹಕಾರ ಸದಾ ಇರುತ್ತದೆ.
5) ಶ್ರೀ ಹಾಲೇಶ್, ಸಿಹೆಚ್.ಸಿ ಭದ್ರಾವತಿ ಸಂಚಾರ ಪೊಲೀಸ್ ಠಾಣೆ ರವರು ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಭಿರಗಳನ್ನು ಆಯೋಜಿಸುತ್ತಿದ್ದು, ಅವರ ಈ ಅವಿರತ ಸೇವೆಗೆ ಮತ್ತು ಸೇವಾ ಮನೋಭಾವಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ, ಶ್ರೀ ಜಗದೀಶ್ ಹಂಚಿನಾಳ್, ಪಿಐ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ, ಶ್ರೀಮತಿ ನಾಗಮ್ಮ, ಪಿಐ ಪೇಪರ್ ಟೌನ್ ಪೊಲೀಸ್ ಠಾಣೆ, ಕು. ಶಿಲ್ಪ ಎನ್, ಪಿಎಸ್ಐ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ, ಶ್ರೀಮತಿ ಕವಿತಾ, ಪಿಎಸ್ಐ ಪೇಪರ್ ಟೌನ್ ಪೊಲೀಸ್ ಠಾಣೆ, ಶ್ರೀಶೈಲ್ ಕೆಂಚಣ್ಣನವರ್, ಪಿಎಸ್ಐ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ, ಶ್ರೀ ಹನುಮಂತಪ್ಪ, ಮೆಗ್ಗಾನ್ ರಕ್ತ ಕೇಂದ್ರದ ಆಪ್ತ ಸಮಾಲೋಚಕರು, ಚಂದನ ಮತ್ತು ಶಿಫಾನ್, ವೈಧ್ಯಾಧಿಕಾರಿಗಳು ಮೆಗ್ಗಾನ್ ಆಸ್ಪತ್ರೆ ಮತ್ತು ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಭಾಗವಹಿಸಿದ್ದರು.
ಸದರಿ ರಕ್ತದಾನ ಶಿಭಿರದಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಮತ್ತು ಸಾರ್ವಜನಿಕರು ಸೇರಿದಂತೆ ಒಟ್ಟು 60 ಜನರು ರಕ್ತದಾನ ಮಾಡಿದರು.