ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸಾಗರ ಟೌನ್ ನ ಶಾರದಾಂಭ ಕಲ್ಯಾಣ ಮಂಟಪದಲ್ಲಿ ಜನಸ್ಪಂದನ ಸಭೆಯನ್ನು ಹಮ್ಮಿಕೊಂಡಿದ್ದು, ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಭಾಗವಹಿಸಿ, ಸಾರ್ವಜನಿಕರ ಕುರಿತು ಕೆಳಕಂಡಂತೆ ಮಾತನಾಡಿದರು.

1) ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಮಾದಕ ವಸ್ತು ಗಾಂಜಾ ವಿರುದ್ಧ ಕಠಿಣ ಕ್ರಮ ಕೈಗೊಂಡು NDPS ಕಾಯ್ದೆಯಡಿ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಕಳೆದ 15 ದಿನಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ 54 ಗಾಂಜಾ ಸೇವನೆ ಪ್ರಕರಣಗಳನ್ನು ಮತ್ತು 7 ಗಾಂಜಾ ಮಾರಾಟ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಂಡಿದೆ. ನಿಮ್ಮ ಸುತ್ತ ಮುತ್ತ ಮಾದಕ ವಸ್ತುಗಳ ಸಾಗಾಟ, ಮಾರಾಟ, ಸಂಗ್ರಹಣೆ, ಸೇವನೆ ಮತ್ತು ಬೆಳೆಯುತ್ತಿರುವ ಬಗ್ಗೆ ಮಾಹಿತಿ ಇದ್ದಲ್ಲಿ, ಧೈರ್ಯವಾಗಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ, ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿಡಲಾಗುತ್ತದೆ. ನಿಮ್ಮ ಸುರಕ್ಷತೆ ಪೊಲೀಸ್ ಇಲಾಖೆಯ ಹೊಣೆ.

2) ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ಜಿಲ್ಲೆಯಾದ್ಯಂತ 79 ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು 10,500 ಜನ ವಿಧ್ಯಾರ್ಥಿಗಳಿಗೆ ಗಾಂಜಾ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮತ್ತು ತಪ್ಪಿತಸ್ಥರಿಗೆ ಕಾನೂನಿನ ಅಡಿ ಇರುವ ಶಿಕ್ಷೆಯ ಬಗ್ಗೆ ಮನವರಿಕೆ ಮಾಡಿಕೊಡಲಾಗಿರುತ್ತದೆ. ಪೋಷಕರು ಕೂಡ ತಮ್ಮ ಮಕ್ಕಳ ಬಗ್ಗೆ ಗಮನ ಹರಿಸಿ, ಒಂದು ವೇಳೆ ತಮ್ಮ ಮಕ್ಕಳು ತಪ್ಪು ದಾರಿ ತುಳಿಯುತ್ತಿದ್ದರೆ ಅವರಿಗೆ ತಿಳುವಳಿಕೆ ಹೇಳಿ ಸರಿದಾರಿಗೆ ತನ್ನಿ ಹಾಗೂ ವ್ಯಸನ ಮುಕ್ತ ಸಮಾಜದ ನಿರ್ಮಾಣ ಮಾಡುವುದು ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿರುವುದಿಲ್ಲ. ಸಾಮಾಜಿಕ ನಾಯತ್ವದಿಂದ ಎಲ್ಲರೂ ಜಾಗರೂಕರಾಗಿರೋಣ, ಸದೃಡ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸೋಣ.

3) ಕಾನೂನಿನ ಮುಂದೆ ಎಲ್ಲರೂ ಒಂದೆ, ಪ್ರತಿಯೊಬ್ಬರನ್ನು ಕೂಡ ಸಮಾನವಾಗಿ ನೋಡಲಾಗುವುದು. ನೊಂದವರು ಸಹಾಯ ಕೋರಿ ಠಾಣೆಗೆ ಬಂದಾಗ ಸರಿಯಾದ ರೀತಿಯಲ್ಲಿ ಅವರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮತ್ತು ಕಾನೂನು ಬಾಹೀರ ಚಟುವಟಿಕೆಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿರುತ್ತದೆ. ಒಂದು ವೇಳೆ ನಿಮಗೆ ಯಾವುದೇ ತೊಂದರೆ ಇದ್ದಲ್ಲಿ ಪೊಲೀಸ್ ಇಲಾಖಾ ಮೇಲಾಧಿಕಾರಿಗಳ ಗಮನಕ್ಕೆ ತನ್ನಿ. ಕಾನೂನನ್ನು ಗೌರವಿಸುವ ಪ್ರತಿಯೊಬ್ಬರಿಗೂ ಪೊಲೀಸ್ ಇಲಾಖೆಯು ಬೆನ್ನೆಲುಬಾಗಿ ಕಾರ್ಯ ನಿರ್ವಹಿಸಲಿದೆ. ಸುಧಾರಿತ ಲೋಕ ಸ್ಪಂದನ ಕ್ಯು ಆರ್ ಕೋಡ್ ವ್ಯವಸ್ಥೆಯನ್ನು ಸಹಾ ಜಾರಿಗೆ ತರಲಾಗಿದ್ದು, ನೀವು ಠಾಣೆಗೆ ಬಂದಾಗ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ನಿಮ್ಮ ದೂರಿಗೆ ಸ್ಪಂದಸಿದ ಬಗ್ಗೆ ನೀವು ನೀಡುವ ಶ್ರೇಯಾಂಕ ಮತ್ತು ದೂರಿನ ಆಧಾರದ ಮೇಲೆ ಕ್ರಮ ಕೈಗೊಂಡು ಪೊಲೀಸ್ ಇಲಾಖೆಯನ್ನು ಜನಸ್ನೇಹಿ ಪೊಲೀಸ್ ಆಗಿ ಬದಲಾಯಿಸಲು ಶ್ರಮಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಇಡಿ.

4) ಸಂಚಾರ ನಿಯಮಗಳನ್ನು ಪಾಲನೆ ಮಾಡುವುದು ಮತ್ತು ವಾಹನಕ್ಕೆ ಸಂಬಂದಿಸಿದ ಅಗತ್ಯ ದಾಖಲಾತಿಗಳನ್ನು ಇಟ್ಟುಕೊಳ್ಳುವುದು ನಮ್ಮೆಲ್ಲರ ಹೊಣೆಯಾಗಿದೆ. ರಸ್ತೆ ಅಪಘಾತಗಳಲ್ಲಿ ವಾಹನ ಸವಾರರು ರಸ್ತೆಯಲ್ಲಿ ಬಿದ್ದು, ತಲೆಗೆ ಮತ್ತು ದೇಹದ ಒಳ ಭಾಗಗಳಿಗೆ ಪೆಟ್ಟಾಗಿ ರಕ್ತ ಸ್ರಾವವಾಗಿ ಪ್ರಾಣಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಿರುತ್ತದೆ. ಆದ್ದರಿಂದ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯೂ ಸಹಾ ಆಗಿರುತ್ತದೆ. ಪೊಲೀಸರ ಭಯಕ್ಕಾಗಿ ಮಾತ್ರ ಹೆಲ್ಮೆಟ್ ಧರಿಸುವುದು, ಸೀಟ್ ಬೆಲ್ಟ್ ಧರಿಸುವುದಕ್ಕಿಂತ ನಿಮ್ಮ ಸುರಕ್ಷತೆಯ ದೃಷ್ಠಿಯಿಂದ ಸಂಚಾರ ನಿಯಮಗಳನ್ನು ಪಾಲನೆ ಮಾಡಿ.

5) ಸಂಚಾರ ನಿಯಗಳನ್ನು ಪಾಲನೆ ಮಾಡಬೇಕೆಂಬ ಅರಿವು ಎಲ್ಲರಿಗೂ ಇರುತ್ತದೆ ಆದರೆ ವಾಹನ ಸವಾರರ ಬೇಜಾಬ್ದಾರಿತನ, ಹತ್ತಿರದ ಪ್ರಯಾಣಕ್ಕೆ ಹೆಲ್ಮೆಟ್ ಬೇಡ ಎಂಬ ಧೋರಣೆಯಿಂದ, ಅಪಘಾತಗಳು ಸಂಭವಿಸುತ್ತವೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರತೀ ತಿಂಗಳು 10,000 ಕ್ಕೂ ಹೆಚ್ಚು ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಇದರ ಮೂಲ ಉದ್ದೇಶ ದಂಡವನ್ನು ಕಟ್ಟಸಿಕೊಳ್ಳುವುದಲ್ಲ, ನಿಮ್ಮಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮತ್ತು ಅಪಘಾತಗಳನ್ನು ತೆಡೆಯಲು ದಂಡ ವಿಧಿಸಲಾಗುತ್ತದೆ.

6) ನಿಮ್ಮ ಸಮಸ್ಯೆಯನ್ನು ಯಾವುದೇ ಸಮಯದಲ್ಲಾದರೂ ಸರಿ ಪೊಲೀಸ್ ಇಲಾಖೆಯ ಗಮನಕ್ಕೆ ತನ್ನಿ, ಆಗ ಮಾತ್ರ ಸದರಿ ಸಮಸ್ಯೆಯನ್ನು ಸಂಬಂದಪಟ್ಟ ಇಲಾಖೆಯವರ ಗಮನಕ್ಕೆ ತಂದು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಸೂಕ್ತ ಪರಿಹಾರ ಒದಗಿಸಲಾಗುತ್ತದೆ. ಪ್ರತಿಯೊಂದು ವಿಚಾರಗಳು ಕೂಡ ಅದರದೇ ಆದ ಇಲಾಖೆಗಳ ವ್ಯಾಪ್ತಿಗೆ ಒಳಪಡುತ್ತವೆ. ಪೊಲೀಸ್ ಇಲಾಖೆಯ ಕಾರ್ಯ ವ್ಯಾಪ್ತಿಗೆ ಒಳಪಡುವಂತಹ ಕೆಲಸ ಕಾರ್ಯಗಳನ್ನು ಸೂಕ್ತ ಕಾಲ ಮಿತಿಯೊಳಗೆ ಮಾಡಲಿದ್ದು, ಎಲ್ಲಾ ಇಲಾಖೆಗಳು ಸೇರಿ ಸುಧಾರಣೆಯನ್ನು ತರುವ ನಿಟ್ಟಿನಲ್ಲಿ ಒಟ್ಟಿಗೆ ಸೇರಿ ಶ್ರಮಿಸಲಾಗುತ್ತದೆ.

7) ನೊಂದವರ ಪರವಾಗಿ ಪೊಲೀಸ್ ಇಲಾಖೆ ಇದ್ದು, ಅವಶ್ಯಕತೆ ಇರುವವರಿಗೆ ರಕ್ಷಣೆ ನೀಡಲಿದ್ದು, ಆರೋಪಿಗಳ ವಿರುದ್ಧ ಕಾನೂನಿನ ಚೌಕಟ್ಟಿನ ಒಳಗೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನು ಗೌರವಿಸುವವರಿಗೆ ಪೊಲೀಸ್ ಇಲಾಖೆಯು ಗೌರವಿಸಲಿದೆ. ಸರ್ವರೂ ಸೇರಿ ಸಮಾನತೆಯಿಂದ, ಕಾನೂನಿಗೆ ತಲೆಬಾಗಿ ನಡೆಯೋಣ ಎಂದು ಹೇಳಿದರು

ಸದರಿ ಕಾರ್ಯಕ್ರಮದಲ್ಲಿ ಶ್ರೀ ಗೋಪಾಲ ಕೃಷ್ಣ ಟಿ ನಾಯಕ್, ಡಿವೈಎಸ್, ಪಿ, ಸಾಗರ ಉಪ ವಿಭಾಗ, ಶ್ರೀ ಮಹಾಬಲೇಶ್ವರ್ ನಾಯಕ್, ಪಿಐ ಸಾಗರ ಟೌನ್ ಪೊಲೀಸ್ ಠಾಣೆ, ಶ್ರೀ ನಾಗರಾಜ್, ಸಿಪಿಐ ಕಾರ್ಗಲ್ ವೃತ್ತ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ