ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ ಹೆಗಡೆ ರವರು ಸೆಪ್ಟೆಂಬರ್ 15ರ ವರಗೆ ಆಗುಂಬೆ ಘಾಟ್ ನಲ್ಲಿ ಬಾರಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ-169ಎ ತೀರ್ಥಹಳ್ಳಿ-ಆಗುಂಬೆ-ಮಲ್ಪೆ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ವರದಿಯನ್ನ ಡಿಸಿಯವರು ಪಡೆದುಕೊಂಡಿದ್ದರು.ರಾಷ್ಟ್ರೀಯ ಹೆದ್ದಾರಿ 169ಎ ರ ಆಗುಂಬೆ ಘಾಟಿಯಲ್ಲಿ ಮಳೆಯಿಂದಾಗಿ ಭಾರಿ ವಾಹನಗಳ ಓಡಾಟದಿಂದ ಭೂ ಕುಸಿತ ಆಗುವ ಸಂಭವವಿರುವುದರಿಂದ ತಾತ್ಕಾಲಿಕವಾಗಿ ಇಂದಿನಿಂದ ಸೆಪ್ಟಂಬರ್ 15 ರವರೆಗೆ ಭಾರಿ ವಾಹನಗಳ ಸಂಚಾರವನ್ನು(ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು)ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಅನವು ಮಾಡಿಕೊಡಬಹುದೆಂದು ಸೂಚಿಸಿದ್ದಾರೆ.
ಪರ್ಯಾಯ ಮಾರ್ಗ…
ಉಡುಪಿ – ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳು ಉಡುಪಿ – ಕುಂದಾಪುರ – ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಸೇರಬಹುದು.
ತೀರ್ಥಹಳ್ಳಿ – ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ – ಮಾಸ್ತಿಕಟ್ಟೆ – ಸಿದ್ದಾಪುರ – ಕುಂದಾಪುರ – ಉಡುಪಿ ಸೇರಬಹುದು.