ನಗರ ನಾಗೋಡಿ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766(ಸಿ) ರಲ್ಲಿ ನಗರ- ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ – ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತೀಪುರ ತಿರುವಿನ ವರೆಗೆ ರಸ್ತೆ ಕುಸಿದಿರುವುದರಿಂದ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಿ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ತಾತ್ಕಾಲಿಕ ಆದೇಶ ಹೊರಡಿಸಿರುತ್ತಾರೆ. ವಾಹನ ಸಂಚಾರಕ್ಕಾಗಿ ಹಾಲಿ ಬಳಕೆ ಮಾಡುತ್ತಿರುವ ರಸ್ತೆಯ ವಿವರಗಳು, ಶಿವಮೊಗ್ಗ ಮಾರ್ಗದಿಂದ ಕುಂದಾಪುರ ಮತ್ತು ಕುಂದಾಪುರದಿಂದ- ಶಿವಮೊಗ್ಗಕ್ಕೆ ಸಂಚರಿಸುವ ಭಾರಿ ವಾಹನಗಳು, ಶಿವಮೊಗ್ಗ -ಸಾಗರ- ಹೊನ್ನಾವರ(NH69) ಮಾರ್ಗದಲ್ಲಿ ಸಂಚರಿಸುವುದು.ಶಿವಮೊಗ್ಗದಿಂದ ಉಡುಪಿ-ಮಂಗಳೂರು ಮತ್ತು ಮಂಗಳೂರಿನಿಂದ ಉಡುಪಿ- ಶಿವಮೊಗ್ಗಕ್ಕೆ ಸಂಚರಿಸುವ ಭಾರಿ ವಾಹನಗಳು, ಶಿವಮೊಗ್ಗ- ಕೊಪ್ಪ-ಕಾರ್ಕಳ-ಮಂಗಳೂರು(SH-57, ಮತ್ತು NH-169ರಲ್ಲಿ ) ಮಾರ್ಗದಲ್ಲಿ ಸಂಚರಿಸುವುದು. ಶಿವಮೊಗ್ಗದಿಂದ ಕುಂದಾಪುರಕ್ಕೆ ಸಂಚರಿಸುವ ಭಾರಿ ವಾಹನಗಳು, ಶಿವಮೊಗ್ಗ- ಹೊಸನಗರದ- ಹುಲಿಕಲ್ ಘಾಟ್- ಸಿದ್ಧಾಪುರ- ಕುಂದಾಪುರ ಮಾರ್ಗದಲ್ಲಿ ಸಂಚರಿಸುವುದು.ಶಿವಮೊಗ್ಗದಿಂದ ಮಂಗಳೂರಿಗೆ ಸಂಚರಿಸುವ ಭಾರಿ ವಾಹನಗಳು, ನರಸಿಂಹರಾಜಪುರ -ಕೊಪ್ಪ- ಶೃಂಗೇರಿ -ಕಾರ್ಕಳ- ಮಂಗಳೂರು.ಪರ್ಯಾಯ ಮಾರ್ಗಗಳಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153