ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್, ರೋಟರಿ ಚಾರಿಟಿ ಫೌಂಡೇಶನ್ ಸಹಯೋಗದಲ್ಲಿ ಇಲ್ಲಿನ ವಿನಾಯಕ ನಗರ ರೋಟರಿ ಬ್ಲಡ್ ಬ್ಯಾಂಕ್ ಆವರಣದಲ್ಲಿ ಸ್ಥಾಪಿಸಲಾಗಿರುವ
ಸಾರ್ವಜನಿಕ ಶುದ್ದ ಕುಡಿಯುವ ನೀರು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ರೈಲ್ವೆ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು, ಕಟ್ಟಡ ಕಾರ್ಮಿಕರು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಹಿನ್ನೆಲೆಯಲ್ಲಿ ಘಟಕ ಸ್ಥಾಪಿಸಲಾಗಿದೆ.

ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ಅಧ್ಯಕ್ಷ ಆರ್. ರವೀಂದ್ರ ಕುಮಾರ್ , ರೋಟರಿ ಚಾರಿಟಿ ಫೌಂಡೇಶನ್ ಅಧ್ಯಕ್ಷ ಆರ್. ಶಿವಶಂಕರ್, ಸಹಾಯಕ ಗವರ್ನರ್ ಎನ್. ರಾಜೇಂದ್ರ ಪ್ರಸಾದ್, ಅನಿಲ್ ಶೆಟ್ಟಿ ರವೀಂದ್ರ ಬೆಣ್ಣೆಹಳ್ಳಿ, ಮುರಳಿ ಮತ್ತಿತರರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ