ಕೆಲವು ದಿನಗಳ ಹಿಂದೆ ಬೊಮ್ಮನಕಟ್ಟೆಯ ನಿವಾಸಿಗಳು ಮಹಾನಗರಪಾಲಿಕೆಗೆ ಬಂದು ಬೊಮ್ಮನಕಟ್ಟೆಯ ನಿವಾಸಿಗಳು ಹಲವಾರು ವರ್ಷಗಳಿಂದ ವಾಸಿಸುತ್ತಿದ್ದು ಆದರೆ ಸರಿಯಾದ ದಾಖಲೆಪತ್ರ ಗಳಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದು ತಮ್ಮ ಸಮಸ್ಯೆಯನ್ನು ತೋಡಿಕೊಂಡಿದ್ದರು. ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಸುನೀತಾ ಅಣ್ಣಪ್ಪ ಅವರ ಮುಂದಾಳತ್ವದಲ್ಲಿ ಬೊಮ್ಮನಕಟ್ಟಿಗೆ ಹೋಗಿ ಅಲ್ಲಿ ನಿವಾಸಿಗಳ ಸಮಸ್ಯೆಯನ್ನು ಆಲಿಸಲಾಯಿತು. ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ ಅವರು ಅಧಿಕಾರಿಗಳನ್ನು ಕರೆಸಿ ಅವರ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿಕೊಳ್ಳುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಉಪ ಮಹಾಪೌರರಾದ ಶಂಕರ.. ಆಶ್ರಯ ಸಮಿತಿಯ ಅಧ್ಯಕ್ಷರಾದ ಶಶಿ… ಪಾಲಿಕೆಯ ಸ್ಥಾಯಿ ಸಮಿತಿಯ ಸದಸ್ಯರಾದ ಶಿವುಕುಮಾರ್. ಅನಿತ ರವಿಶಂಕರ್, ವಾರ್ಡ್ನಸದಸ್ಯರಾದ ಆಶಾ ಚಂದ್ರಪ್ಪ ಹಾಗೂ ನಾಗರಿಕರು ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ
CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153