ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದೆಲ್ಲೆಡೆ ಹೆಚ್ಚಾಗಿರುವ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಸಂತಾಹರಣ ಶಸ್ತ್ರ ಚಿಕಿತ್ಸೆ ಹಾಗೂ ರೇಬಿಸ್ ಲಿಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದಲ್ಲಿ ಬೀದಿನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿ, ರೇಬಿಸ್ ವಿರುದ್ಧ ಲಸಿಕೆ ಹಾಕಿ ಕಿವಿಗೆ ಗುರುತು ಮಾಡಿ ಕಾರ್ಯಾಚರಣೆ ಪೂರ್ಣವಾದ ಬಳಿಕ ಅವುಗಳನ್ನು ಹಿಡಿದ ಸ್ಥಳಗಳಲ್ಲೇ ಬಿಡಲಾಗುವುದು.

ಈ ಕಾರ್ಯಕ್ರಮದ ಉದ್ದೇಶವು ಮಾನವೀಯ ಹಾಗೂ ವೈಜ್ಞಾನಿಕ ರೀತಿಯಲ್ಲಿ ನಾಯಿಗಳ ಸಂತತಿಯನ್ನು ನಿಯಂತ್ರಣದಲ್ಲಿಡುವುದು. ಪ್ರಾಣಿ ಜನ್ಯ ರೋಗಗಳಾದ ರೇಬಿಸ್, ಲೆಪ್ಟೋಸ್ಟೈರಾ ಇತ್ಯಾದಿ ರೋಗಗಳಿಂದ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡುವುದು ಮತ್ತು ಬೀದಿನಾಯಿಗಳಿಂದ ಸಾರ್ವಜನಿಕರಿಗಾಗುವ ತೊಂದರೆಗಳನ್ನು ನಿವಾರಿಸುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಡಾ. ಕವಿತಾ ಯೋಗಪ್ಪನವರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಸ್ತ್ರಚಿಕಿತ್ಸೆಯು ರಾಜೀವಗಾಂಧಿ ಬಡಾವಣೆಯ ಮಹಾವೀರ್ ಗೋಶಾಲೆ ಪಕ್ಕದಲ್ಲಿ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ಪಾಲಿಕೆ ಸಹಾಯವಾಣಿ 18004257677 ನ್ನು ಸಂಪರ್ಕಿಸುವುದು.

ವರದಿ ಪ್ರಜಾ ಶಕ್ತಿ