ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಹಾಗೂ ರೋಸ್ಟರ್‍ಗನುಗುಣವಾಗಿ ಆಫ್‍ಲೈನ್ ಪ್ರವೇಶ ನೀಡಲಾಗುವುದು. ಅರ್ಜಿ ಸಲ್ಲಿಸಲು ಜು.15 ಕಡೆಯ ದಿನವಾಗಿದ್ದು, ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.35 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ 63 ಸೀಟುಗಳು, ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್ 63, ಕಮರ್ಷಿಯಲ್ ಪ್ರಾಕ್ಟಿಸ್(ಕನ್ನಡ) 31, ಕಮರ್ಷಿಯಲ್ ಪ್ರಾಕ್ಟಿಸ್(ಇಂಗ್ಲಿಷ್) 32, ಅಪೆರಲ್ ಡಿಸೈನಿಂಗ್ ಫ್ಯಾಬ್ರಿಕೇಷನ್ ಟೆಕ್ನಾಲಜಿ 63 ಸೀಟುಗಳು ಲಭ್ಯವಿರುತ್ತದೆ.
ಅಭ್ಯರ್ಥಿಗಳು ಪ್ರವೇಶ ಪಡೆಯಲು ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್‍ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ(ಕ್ಷೇತ್ರ ಶಿಕ್ಷಣಾಧಿಕಾರಿಗಳು ದೃಢೀಕರಿಸಿದ ಸಹಿಯೊಂದಿಗೆ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಭಾವಚಿತ್ರ 04 ನ್ನು ಸಲ್ಲಿಸಬೇಕು. ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ರವಿನಾಯಕ್ ಡಿ, ಪ್ರಾಂಶುಪಾಲರು, ಮೊ.ಸಂ: 9886610245 ನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ತಿಳಿಸಿದ್ದಾರೆ.