ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2024-25ನೇ ಸಾಲಿಗೆ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆಯಡಿ ಡಿ.ಬಿ.ಟಿ. ತಂತ್ರಾಂಶದಲ್ಲಿ ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.


ಯೋಜನೆಗಳು: ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬೈಲ್‍ಕಿಟ್ ಯೋಜನೆ.


ಆಸಕ್ತರು ಗ್ರಾಮಾಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು https://sevasindhu.karnataka.gov.in/Sevasindhu/DepartmentServicesKannada ಪೋರ್ಟಲ್‍ನಲ್ಲಿ ಜುಲೈ 31 ರೊಳಗಾಗಿ ಸಲ್ಲಿಸಿ, ಸಲ್ಲಿಸಿದ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಎಲ್ಲಾ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿದ ದ್ವಿಪ್ರತಿಗಳಲ್ಲಿ ಆಯಾ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ -9980150110/8746997896, ಭದ್ರಾವತಿ-7899137243, ಶಿಕಾರಿಪುರ-9741161346, ತೀರ್ಥಹಳ್ಳಿ-9480767638, ಸಾಗರ-9535247757, ಸೊರಬ-9110493122, ಹೊಸನಗರ-9731922693 ಹಾಗೂ ಜಿಲ್ಲಾ ಕಚೇರಿ ದೂ.ಸಂ.:08182-295234/251676 ಗಳನ್ನು ಸಂಪರ್ಕಿಸುವುದು.

ವರದಿ ಪ್ರಜಾ ಶಕ್ತಿ