ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿ/ಮೇಕೆ ಸಾಕಾಣಿಕೆ ಮಾಡಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಬೆಂಗಳೂರು ಇಲ್ಲಿ ನೊಂದಾಯಿಸಿಕೊಂಡಿರುವ ಜಿಲ್ಲೆಯ ಕುರಿ ಮತ್ತ ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ಹಾಗೂ ಕರ್ನಾಟಕ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾ ಮಂಡಳದೊಂದಿಗೆ ಷೇರುದಾರರಾಗಿ ಸಕ್ರಿಯ ಸಂಘಗಳ ಸದಸ್ಯರುಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಕರ್ನಾಟಕ ಕುರಿ ಮತ್ತ ಉಣ್ಣೆ ಅಭಿವೃದ್ಧಿ ನಿಗಮ, ಸಿ.ಎಂ.ಸಿ.ಕಟ್ಟಡ, 2ನೇ ಮಹಡಿ, ನೆಹರೂ ರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜು. 25 ರೊಳಗಾಗಿ ಸಲ್ಲಿಸುವಂತೆ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.