ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿ ದೈವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ ನೀಡಿದರು.

ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೈವಸ್ಥಾನಕ್ಕೆ 9ರಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಶ್ರೀಮತಿ ದೇವಿಶ್ ಶೆಟ್ಟಿ ದಂಪತಿ ಸಮೇತ ಭೇಟಿ ದಿವ್ಯ ದೇವಿಯ ಆಶೀರ್ವಾದ ಪಡೆದರು.

2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ ಟಿ20 ವಿಶ್ವಕಪ್ ಗೆಲುವಿಗೆ ಕಾರಣಿಕರ್ತರಾದ ಸೂರ್ಯ ಕುಮಾರ್ ಯಾದವ್ ಅವರನ್ನು ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ನಿರ್ದೇಶಕರು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ