ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗ ನಗರದಲ್ಲಿ ಹಾಗೂ ಜಿಲ್ಲಾಧ್ಯಂತ ಹರಡುತ್ತಿರುವ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರಿಂದ ಶಿವಮೊಗ್ಗದ ಮಹಾನಗರ ಪಾಲಿಕೆ ಅಧಿಕಾರಿಗಳು ಪ್ರತಿ ವಾರ್ಡುಗಳಲ್ಲಿ ವಾರಕ್ಕೆ ಎರಡು ದಿನ ಔಷಧಿ ಸಿಂಪಡಣೆ ಮಾಡಬೇಕೆಂದು ಹೇಳಿದರು. ಪಾಲಿಕೆ ವತಿಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ಮನವಿಯಲ್ಲಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದಿನೇಶ್ ಎಸ್ಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ್ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್ ಕೆ ಜಿಲ್ಲಾ ಗೌರವ ದಕ್ಷ ಪ್ರವೀಣ್ ಎಂ ಆರ್ ಜಿಲ್ಲಾ ಗೌರವದಕ್ಷ ದಾಮೋದರ್ ನಗರ ಉಪಾಧ್ಯಕ್ಷ ಸಚಿನ್ ಗೌಡ ನಗರ ಪ್ರಧಾನ ಕಾರ್ಯದರ್ಶಿ ಶಶಾಂಕ್ ಸಮಿವುಲ್ಲಾ ಅನಿಲ್ ಪೀಟರ್ ರಮೇಶ್ ವಿಜಿ ಬಾವುದ್ದೀನ್ ಜಿಲ್ಲಾ ಹಾಗೂ ತಾಲೂಕ ಘಟಕದ ಪದಾಧಿಕಾರಿಗಳು ಭಾಗಿಯಾಗಿದ್ದರು.