ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ಇದರಿಂದಾಗಿ ನದಿಗಳು, ಹಳ್ಳಗಳು ತುಂಬಿ, ಅಪಾಯ
ಮಟ್ಟವನ್ನು ತಲುಪಿ ಹರಿಯುತ್ತಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು, ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದನ್ನು ಹಾಗೂ ಈ ರೀತಿಯ ಅಪಾಯಕಾರಿ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಭೇಟಿಯನ್ನು ನೀರಿನ ಹರಿವು ಕಡಿಮೆಯಾಗುವವರೆಗೆ ಸಂಭಂದಪಟ್ಟ ಇಲಾಖೆಗಳಿಂದ ನಿಷೇದಿಸಲಾಗಿರುತ್ತದೆ.
ಈ ಬಗ್ಗೆ ಈಗಾಗಲೇ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೂಚನಾ ಫಲಕಗಳನ್ನು ಅಳವಡಿಸಿ ಸಿಬ್ಬಂಧಿಗಳನ್ನು ನಿಯೋಜಿಸಲಾಗಿರುತ್ತದೆ.ಆದ್ದರಿಂದ ಸಾರ್ವಜನಿಕರು ನೀರಿನ ಹರಿವು ಕಡಿಮೆಯಾಗುವವರೆಗೆ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡದೇ ಸಹಕರಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112 ಸಹಾಯವಾಣಿಗೆ ಕರೆ ಮಾಡಲು ಕೋರಿದೆ.