ಶ್ರೀಮತಿ ಸ್ವಪ್ನ ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ, ಚೆನ್ನಮ್ಮ ಪಡೆ ಉಸ್ತುವಾರಿ ರವರು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರ ಕುರಿತು ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ.
1) ಹೆಚ್ಚಿನ ಜನ ಸಂದಣಿ ಇರುವ ಪ್ರದೇಶದಲ್ಲಿ ಸಾರ್ವಜನಿಕರು ಜೇಬುಗಳ್ಳರಿಂದ ಎಚ್ಚರದಿಂದಿರಿ ಹಾಗೂ ತಮ್ಮ ಮೊಬೈಲ್ ಫೋನ್, ಪರ್ಸ್ ಮತ್ತು ಬ್ಯಾಗ್ ಗಳ ಬಗ್ಗೆ ಗಮನವಿರಲಿ.
2) ಸಾರ್ವಜನಿಕರು ತಮ್ಮ ಸುರಕ್ಷತೆಯ ದೃಷ್ಠಿಯಿಂದ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲನೆ ಮಾಡಿ ಹಾಗೂ ಕೇವಲ ಪೊಲೀಸರು ವಿಧಿಸುವ ದಂಡದಿಂದ ತಪ್ಪಿಸಿಕೊಳ್ಳಲು ಮಾತ್ರ ಹೆಲ್ಮೆಟ್ ಧರಿಸದೇ, ನಿಮ್ಮ ಜೀವ ರಕ್ಷಣೆಯ ದೃಷ್ಠಿಯಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ.
3) ಕಾನೂನಿನಲ್ಲಿ ಮಹಿಳೆ ಹಾಗೂ ಮಕ್ಕಳಿಗಿರುವ ವಿಶೇಷ ಹಕ್ಕುಗಳ ಬಗ್ಗೆ ಮತ್ತು ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನೀಷೇಧ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿರುತ್ತಾರೆ.
4) ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಶಿವಮೊಗ್ಗ ನಗರದಲ್ಲಿ ಚೆನ್ನಮ್ಮ ಪಡೆ ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಚೆನ್ನಮ್ಮ ಪಡೆ / 112 ಸಹಾಯವಾಣಿಗೆ ಸಂಪರ್ಕಿಸಿ.
ಕಾನೂನನ್ನು ಪಾಲಿಸಿ, ಕಾನೂನನ್ನು ಗೌರವಿಸಿ ಆಗ ಕಾನೂನು ನಿಮ್ಮನ್ನು ರಕ್ಷಿಸುತ್ತದೆ, ನಿಮ್ಮ ಸುರಕ್ಷತೆ ನಮ್ಮ ಹೊಣೆ. ಈ ಸಂದರ್ಭದಲ್ಲಿ ಚೆನ್ನಮ್ಮ ಪಡೆಯ ಪೊಲೀಸ್ ಅಧಿಕಾರಿ, ಸಿಬ್ಬಂಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.