ಶಿವಮೊಗ್ಗದ ಗುರುಪುರದಲ್ಲಿರುವ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯುತ್ತದೆ.ತಮಿಳು ಸಮುದಾಯದವರ ಆರಾಧ್ಯ ದೈವ ಗುಡ್ಡೇಕಲ್‌ನ ಶ್ರೀ ಬಾಲಸುಬ್ರಮಣ್ಯ ಸ್ವಾಮಿಯ ಜಾತ್ರಾ ಮಹೋತ್ಸವ ಸಂಭ್ರಮಕ್ಕೆ ಸಾಕ್ಷಿಯಾಗಿದೆ.
ಆಷಾಢ ಮಾಸದ ಭರಣಿ ಹಾಗೂ ಕೃತ್ತಿಕ ನಕ್ಷತ್ರದಂದು ನಡುವೆ ಆಡಿ ಕೃತ್ತಿಕಾ ಜಾತ್ರೆ ಹಿನ್ನೆಲೆಯಲ್ಲಿ ಸಾವಿರಾರು ಜನರು ಗುಡ್ಡೇಕಲ್‌ಗೆ ತೆರಳಿ ದೇವರ ದರ್ಶನ ಪಡೆದರು. ಜಾತ್ರೆ ಅಂಗವಾಗಿ ಬೆಳಗ್ಗೆ 4 ಗಂಟೆಯಿಂದಲೇ ನೂರಾರು ಭಕ್ತರು ಕುಟುಂಬ ಸಮೇತರಾಗಿ ನಗರದ ವಿವಿಧ ಭಾಗದಿಂದ ಪಾದಯಾತ್ರೆ ಮೂಲಕ ಹೊರಟು ದೇವಸ್ಥಾನ ತಲುಪಿ ಹರಕೆ ತೀರಿಸುತ್ತಿದ್ದಾರೆ.
ಅರಿಶಿನದ ಮಡಿ ವಸ್ತ್ರ ಧರಿಸಿದ ಮಹಿಳೆಯರು, ಮಕ್ಕಳು, ಹಿರಿಯರು ಮತ್ತು ಯುವಕರು ನಾನಾ ರೀತಿಯಿಂದ ಅಲಂಕೃತಗೊಂಡಿದ್ದ ಕಾವಡಿಯನ್ನು ಹೊತ್ತು, ಬಾಯಿಗೆ ವೇಲಾಯುಧ ಚುಚ್ಚಿಕೊಂಡು, ಕಬ್ಬಿಣದ ಮುಳ್ಳಿನ ಪಾದುಕೆ ಧರಿಸಿ ದೇವರ ನಾಮವಾದ ಹರೋ ಹರೋ ಎಂದು ಹೇಳುತ್ತಾ ಮಂಗಳವಾದ್ಯದೊಂದಿಗೆ ದೇವಸ್ಥಾನಕ್ಕೆ ತೆರಳಿ ಹರಕೆ ಒಪ್ಪಿಸುತ್ತಾರೆ.
ದೇವಾಲಯದಲ್ಲಿ 500 ಹೆಚ್ಚು ಸೇವ ಪ್ರತಿನಿಧಿಗಳು ಸೇವ ಕಾರ್ಯ ಮಾಡುತ್ತಿದ್ದಾರೆ. ಎರಡು ದಿನವು ಸಹ ಭಕ್ತಾದಿಗಳಿಗೆ ಅನ್ನ ಸಂತ್ರಪಣೆ ನಡೆಯುತ್ತದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸ್ವಾಮಿಯ ದರ್ಶನ ಪಡೆದುಕೊಳ್ಳಬೇಕಾಗಿ ದೇವಸ್ಥಾನ ಆಡಳಿತ ಮಂಡಳಿ ಕೋರಿದ್ದಾರೆ.