ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹೇಮಂತ್ ಜಿಲ್ಲಾ ಪಂಚಾಯತ್, ಶಿವಮೊಗ್ಗ ಇವರು ಭದ್ರಾವತಿ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಊಟ ಮಾಡಿದರು. ನಂತರ ವಸತಿ ನಿಲಯದಲ್ಲಿ ನೀಡಲಾಗುವ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

ತದನಂತರ ಕುಡಿಯುವ ನೀರು, ಶೌಚಾಲಯ ಶುಚಿತ್ವ, ಅಡುಗೆ ಕೋಣೆ ಶುಚಿತ್ವ, ವಿದ್ಯಾರ್ಥಿಗಳ ಕೋಣೆಗಳ ನಿರ್ವಹಣೆ ಬಗ್ಗೆ ಪರಿಶೀಲಿಸಿದರು. ನಿಯಮಾನುಸಾರ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ವಸತಿ ನಿಲಯದಲ್ಲಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಸತಿ ನಿಲಯದ ವಿದ್ಯಾರ್ಥಿಗಳು ಶಿಸ್ತು ಮತ್ತು ಜವಾಬ್ದಾರಿಗಳನ್ನು ತಪ್ಪದೇ ಪಾಲಿಸಬೇಕು. ಇದರಿಂದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ, ಭದ್ರಾವತಿ, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ವಸತಿ ನಿಲಯದ ಮೇಲ್ವಿಚಾರಕರು ಹಾಜರಿದ್ದರು.

ವರದಿ ಪ್ರಜಾ ಶಕ್ತಿ