ದಿನಾಂಕ 04-08-2021 ರಂದು ಶಿವಮೊಗ್ಗ ತಾಲ್ಲೂಕು ಸಂತೆಕಡೂರು ಗ್ರಾಮದಲ್ಲಿರುವ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಸದರಿ ದಿನದಂದು ಈ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಾದ ಸಂತೆಕಡೂರು, ಶ್ರೀರಾಮನಗರ, ರಂಪುರ, ಭಂಡಾರಿ ಕ್ಯಾಂಪ್, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ ತೋಟದ ಕೆರೆ, ಹುರಳಿಹಳ್ಳಿ, ಗಣಿದಾಳು, ಉಬೈ ಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈ ತೊಟ್ಟಿಲು, ಕಾಕನಹಸೂಡಿ, ಲಿಂಗಾಪುರ, ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿದೆ.