ಮುಖ್ಯ ಕಾರ್ಯನಿರ್ವಾಹಕಧಿಕಾರಿ ಹೇಮಂತ್ ಜಿಲ್ಲಾ ಪಂಚಾಯತ್, ಶಿವಮೊಗ್ಗ ರವರು ಯೋಜನಾ ನಿರ್ದೇಶಕರು ನಿರ್ಮಿತಿ ಕೇಂದ್ರ ಹಾಗೂ ಉಪ ನಿರ್ದೇಶಕರು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ರವರೊಂದಿಗೆ ಪೂರಕ ಅಂದಾಜು ಯೋಜನೆಯಡಿಯಲ್ಲಿ ವಿನೂತನವಾಗಿ ನಿರ್ಮಿಸಿರುವ ಶಿವಮೊಗ್ಗ ತಾಲೂಕಿನ ಮಾದರಿಪಾಳ್ಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಕಟ್ಟಡ ಪರಿಶೀಲಿಸಿದರು.

ಇದೆ ರೀತಿ ಇನ್ನೂ ಉತ್ತಮ ಮಟ್ಟದಲ್ಲಿ ಹೊಸ ತಂತ್ರಜ್ಞಾನ, ಕೌಶಲ್ಯ ಬಳಸಿಕೊಂಡು ಬಾಲಸ್ನೇಹಿಯಾಗಿ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ MGNREGA ಹೊಂದಾಣಿಕೆ ಅನುದಾನ ಘಟಕ ವೆಚ್ಚ 20 ಲಕ್ಷಗಳಲ್ಲಿ ಜಿಲ್ಲೆಯಲ್ಲಿ ವಿವಿಧ ತಾಲ್ಲೂಕುಗಳಲ್ಲಿ ಒಟ್ಟು 22 ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ನಿರ್ಮಾಣ ಮಾಡುವ ಬಗ್ಗೆ ಪರಿಶೀಲಿಸಿ ಈ ಸಂಬಂಧಿಸಿದಂತೆ ಮಾದರಿ ನಕ್ಷೆ ಮತ್ತು ಅಂದಾಜು ಪಟ್ಟಿ ತಯಾರಿಸಿ ಸಲ್ಲಿಸಲು ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.

ಅಂಗನವಾಡಿ ಕೇಂದ್ರಗಳ ಹೊರಂಗಣ ಸ್ವಚ್ಛತೆ, ಎಲ್ಲಾ ಅಂಗನವಾಡಿ ಕೇಂದ್ರದಲ್ಲಿ ದಾಖಲಾದ ಎಲ್ಲಾ ಮಕ್ಕಳು ಹಾಜರಿರುವಂತೆ ಅಗತ್ಯ ಕ್ರಮ ವಹಿಸಲು ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆರವರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಮುಖ್ಯಸ್ಥರಾದ ನಾಗರಾಜ್ ಮತಿತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ