ಶ್ರೀಮತಿ ಮಂಜಮ್ಮ ಪಿಎಸ್ಐ ದೊಡ್ಡಪೇಟೆ ಪೊಲೀಸ್ ಠಾಣೆ ರವರು ಶಿವಮೊಗ್ಗ ಟೌನ್ ಮಿಳ್ಳಘಟ್ಟದ ಸರ್ಕಾರಿ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು, ಶಾಲಾ ವಿದ್ಯಾರ್ಥಿಗಳಿಗೆ POCSO ಕಾಯ್ದೆ, ಬಾಲ್ಯ ವಿವಾಹ ನಿಷೇದ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇದ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿರುತ್ತಾರೆ.

ಮಕ್ಕಳು ಓದಿನ ಸಮಯದಲ್ಲಿ ಚೆನ್ನಾಗಿ ಓದಿ ವಿದ್ಯಾವಂತರಾಗಬೇಕು. ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ