ಶಿವಮೊಗ್ಗ ಟೌನ್ ಗಾಡಿಕೊಪ್ಪದ ವಾಸಿಗಳಾದ ಶ್ರೀ ರವಿ ಎಸ್ ಮತ್ತು ಇವರ ಮಗಳಾದ ಕು. ಧನುಶ್ರೀ ರವರುಗಳು, 2005ನೇ ಸಾಲಿನಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಅನಾಥ ಶವಗಳು ಕಂಡು ಬಂದತಂಹ ಸಂದರ್ಭದಲ್ಲಿ ಪೊಲೀಸ್ ಇಲಾಖೆಯು ಮಾಹಿತಿ ನೀಡಿದ ತಕ್ಷಣ ಅನಾಥ ಶವಗಳನ್ನು ಸಾಗಿಸಿ, ಸಂಸ್ಕಾರ ನೆರವೇರಿಸುವಲ್ಲಿ ಪೊಲೀಸ್ ಇಲಾಖೆಗೆ ಸಹಕರಿಸಿ ನಿಸ್ವಾರ್ಥ ಸೇವೆಯನ್ನು ಮಾಡುತ್ತಾ ಬಂದಿರುತ್ತಾರೆ.
ಇವರುಗಳ ಈ ನಿಸ್ವರ್ಥ ಸೇವೆಗೆ 8 ರಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ, ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀ ಅನಿಲ್ ಕುಮಾರ್ ಭುಮ ರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಎ ಉಪ ವಿಭಾಗ ಮತ್ತು ಶ್ರೀ ಸುರೇಶ್ ಎಂ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಬಿ ಉಪ ವಿಭಾಗ ರವರು ಉಪ ಸ್ಥಿತರಿದ್ದರು.