ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರೀಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಶಿವಮೊಗ್ಗ ಜಿಲ್ಲೆಯಲ್ಲಿ ಇಲಾಖೆ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಅಂಗನವಾಡಿಗಳ ಕೇಂದ್ರಗಳ ನಿರ್ವಹಣೆ ಮತ್ತು ಗುಣಮಟ್ಟದ ಪೌಷ್ಟಿಕ ಆಹಾರ ಪೂರೈಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ ಆರಂಭಿಸಲಾಗಿರುವ ಸರ್ಕಾರಿ ಮಾಂಟೇಸರಿಗಳನ್ನು ಜಿಲ್ಲೆಯಲ್ಲಿ ಆರಂಭಿಸಿದರೆ ಹೇಗೆ ಕಾರ್ಯನಿರ್ವಹಣೆ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಬಿ. ಎಚ್. ಕೃಷ್ಣಪ್ಪ, ಜಿಲ್ಲಾ ನಿರೂಪಣಾಧಿಕಾರಿ ಡಾ. ಸಂತೋಷ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ ಸೇರಿದಂತೆ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ವರದಿ ಪ್ರಜಾ ಶಕ್ತಿ