ಶಿವಮೊಗ್ಗ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚುತ್ತಿದ್ದು, ಇದರ ವಿರುದ್ದ ಹೆಚ್ಚೆಚ್ಚು ಪ್ರಕರಣಗಳನ್ನು ದಾಖಲಿಸಬೇಕು ಹಾಗೂ ಅರಿವನ್ನು ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.


ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಮತ್ತು ಜಿಲ್ಲಾ ಮಟ್ಟದ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಏಪ್ರಿಲ್ ಮಾಹೆಯಿಂದ ಜೂನ್ ವರೆಗೆ ಜಿಲ್ಲೆಯಲ್ಲಿ 43 ಬಾಲ್ಯ ವಿವಾಹ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದಲ್ಲಿ 19 ಮತ್ತು ಭದ್ರಾವತಿ 12 ಸಂಖ್ಯೆಯಲ್ಲಿದ್ದು ಈ ಎರಡು ತಾಲ್ಲೂಕುಗಳಲ್ಲೇ ಹೆಚ್ಚು ಬಾಲ್ಯ ವಿವಾಹ ಪ್ರಕರಣಗಳಿವೆ. ಹೆಚ್ಚಿನ ಪ್ರಕರಣ ದಾಖಲಾಗಿರುವೆಡೆ ಸಮುದಾಯದಲ್ಲಿ ಸೇವೆ ಸಲ್ಲಿಸಿರುವ ಮುಖಂಡರ ಮುಂದಾಳತ್ವದಲ್ಲಿ, ಅವರನ್ನೊಳಗೊಂಡು ಆ ಪ್ರದೇಶದಲ್ಲಿ ಪರಿಣಾಮಕಾರಿ ಅರಿವು ಕಾರ್ಯಕ್ರಮ ಕೈಗೊಳ್ಳಬೇಕು ಹಾಗೂ ಬಾಲ್ಯ ವಿವಾಹ ವಿರುದ್ದ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.


ಹಾಗೂ 2022-23 ನೇ ಸಾಲಿನಲ್ಲಿ ಒಟ್ಟು 247 ಬಾಲ ಗರ್ಭಿಣಿಯರ ಪ್ರಕರಣ ದಾಖಲಾಗಿದ್ದು, ಇದನ್ನು ತಡೆಯಲು ಸಿಡಿಪಿಓ ಗಳು ಶಾಲಾ-ಕಾಲೇಜು, ಹಾಸ್ಟೆಲ್‌ಗಳಲ್ಲಿ ಅರಿವು ಕಾರ್ಯಕ್ರಮ ಮಾಡುವುದರೊಂದಿಗೆ ಪೋಷಕರಿಗೆ ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ನೇಮಕಾತಿ, ಪದೋನ್ನತಿ ಮತ್ತು ವರ್ಗಾವಣೆಗೆ ಸಂಬAಧಿಸಿದAತೆ ವರ್ಗಾವಣೆ ಮತ್ತು ಪದೋನ್ನತಿಯ ಪ್ರಕ್ರಿಯೆಯನ್ನು ಮೊದಲ ಆದ್ಯತೆಯಲ್ಲಿ ಮುಗಿಸಿ ನಂತರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕು.


ಜಿಲ್ಲೆಯಲ್ಲಿ 126 ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಧಿಕಾರಿಗಳು ನೇಮಕಾತಿ ವೇಳೆ ಯಾವುದೇ ರೀತಿಯ ಒತ್ತಡಕ್ಕೆ ಮಣಿಯದೇ, ಪಾರದರ್ಶಕವಾಗಿ ಮತ್ತು ಎಚ್ಚರಿಕೆಯಿಂದ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.


ಜಿಲ್ಲೆಯಲ್ಲಿ ಒಟ್ಟು 2563 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, 2103 ಗ್ರಾಮೀಣ ಭಾಗದಲ್ಲಿ ಮತ್ತು 460 ನಗರ ಭಾಗದಲ್ಲಿವೆ. 471 ಅಂಗನವಾಡಿಗಳಿಗೆ ನಿವೇಶನದ ಅಗತ್ಯವಿದ್ದು, ಶೀಘ್ರದಲ್ಲೇ ಬಿಇಓ ಒಳಗೊಂಡ ಕಾರ್ಯಪಡೆ ರಚಿಸಿ ಜಾಗ ಹುಡುಕಲಾಗುವುದು. ಸರ್ಕಾರಿ ಜಾಗ ಲಭ್ಯವಿಲ್ಲದಿದ್ದರೆ ಸಿಎ ನಿವೇಶನಗಳನ್ನು ನೋಡಿ, ಜಾಗವನ್ನು ಒದಗಿಸಲಾಗುವುದು ಎಂದರು.


ಪ್ರತಿ ವರ್ಷ ಅಂಗನವಾಡಿ ಕೇಂದ್ರಗಳ ತಕ್ಕಡಿಗಳ ತೂಕ ಮತ್ತು ಅಳತೆಯನ್ನು ಕಾನೂನು ಮಾಪನಶಾಸ್ತç ಇಲಾಖೆಯಿಂದ ಸತ್ಯಾಪನೆ ಮತ್ತು ದುರಸ್ತಿ ಮಾಡಿಸುವ ಅವಶ್ಯಕತೆ ಇರುತ್ತದೆ. ಆದರೆ ಸದರಿ ಇಲಾಖೆಯವರು ಸಂಪೂರ್ಣ ರಿಪೇರಿ ಅಗತ್ಯವಿದೆ ಎಂದು ತಿಳಿಸಿರುತ್ತಾರೆ ಹಾಗೂ ಅದರ ಶುಲ್ಕವೇ ಹೆಚ್ಚಿರುವ ಕಾರಣ ಈ ಕುರಿತು ಪರಿಶೀಲಿಸಿ ಇನ್ನು 15 ದಿನಗಳ ಒಳಗಾಗಿ ತೂಕದ ಸಾಧನಗಳ ಸತ್ಯಾಪನೆ ಮತ್ತು ದುರಸ್ತಿ ಮಾಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ವರದಿ ಪ್ರಜಾ ಶಕ್ತಿ