ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರವರು ಜಿಲ್ಲೆಯಲ್ಲಿ ಅನಧಿಕೃತ ಸ್ಪಾ ಗಳು ನಡೆಸುವರ ಮೇಲೆ ಕಠಿಣ ಕಾನೂನು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಸ್ಪಾ ಗಳ ಸಂಖ್ಯೆ ಹೆಚ್ಚುತ್ತಿದ್ದು ಇಲ್ಲಿ ವೇಶ್ಯಾವಾಟಿಕೆಯಂತಹ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಕೋರಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಸ್ಪಾಗಳು ಪಾಲಿಕೆ ಮತ್ತು ಎಸ್‌ಪಿ ಕಚೇರಿಯಿಂದ ಪರವಾನಗಿ ಮತ್ತು ಅನುಮತಿ ಪಡೆಯಬೇಕು. ಪರವಾನಗಿ ಪಡೆಯದೇ ಹಾಗೂ ನಿಯಮಗಳನ್ನು ಅನುಸರಿಸದೇ ಅನಧಿಕೃತವಾಗಿ ನಡೆಸುತ್ತಿರುವ ಸ್ಪಾಗಳ ಮೇಲೆ ದಾಳಿ ನಡೆಸಿ, ಮುಚ್ಚಲು ಕ್ರಮ ವಹಿಸಲಾಗುವುದು. ದಾಳಿ ವೇಳೆ ಸಿಡಿಪಿಓ ಗಳು ಮತ್ತು ಮಕ್ಕಳ ಕಲ್ಯಾಣ ಸಮಿತಿಯವರು ಸಹ ಹಾಜರಾಗಬೇಕು. ಹಾಗೂ ನಿಯಮಿತವಾಗಿ ಸ್ಪಾಗಳ ಚಟುವಟಿಕೆ ಬಗ್ಗೆ ಪರಿಶೀಲಿಸುತ್ತಿರುಬೇಕು ಎಂದು ತಿಳಿಸಿದ ಅವರು ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಕುರಿತು ಅರಿವು ಕಾರ್ಯಗಳನ್ನು ಕೈಗೊಳ್ಳಬೇಕು ಹಾಗೂ ಪೋಷಕರು, ಮುಖಂಡರ ಮುಂದಾಳತ್ವದಲ್ಲಿ ಜಾಗೃತಿ ಮೂಡಿಸಬೇಕೆಂದರು.


ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ನ್ಯಾಯಾಲಯಕ್ಕೆ ಸಲ್ಲಿಸುವ ಡಿಐಆರ್‌ಗಳಿಗೆ ನ್ಯಾಯಾಲಯಗಳಿಂದ ಮಧ್ಯಂತರ ಆದೇಶ ಮತ್ತು ಆದೇಶ ನೀಡುವುದು ವಿಳಂಬವಾಗುತ್ತಿದ್ದು ಸಂರಕ್ಷಣಾಧಿಕಾರಿಗಳು, ಪೊಲೀಸ್ ಇಲಾಖೆ ಮತ್ತು ನ್ಯಾಯವಾದಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಮಧ್ಯಂತರ ಆದೇಶದ ನೀಡುವ ಕುರಿತು ನ್ಯಾಯಾಲಯ ಸೂಕ್ತ ಕ್ರಮ ವಹಿಸಬೇಕೆಂದು ಕೋರಿದರು.
2022 ರಿಂದ 2024 ರವರೆಗೆ ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆಯಡಿ 249 ಪ್ರಕರಣ ದಾಖಲಾಗಿದ್ದು ವಿಚಾರಣೆ, ತನಿಖೆ ಹಂತದಲ್ಲಿ ಪ್ರಕರಣಗಳು ಇವೆ. ಶಿವಮೊಗ್ಗ ಮತ್ತು ಭದ್ರಾವತಿ ತಾಲ್ಲೂಕಿನಲ್ಲೆ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸಿಡಿಪಿಓ ಇತರೆ ಅಧಿಕಾರಿಗಳ ಸಹಯೋಗದೊಂದಿಗೆ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಮಹಿಳಾ ಗ್ರಾಮಸಭೆಗಳು, ಸ್ತಿçÃಶಕ್ತಿ ಗುಂಪುಗಳಲ್ಲಿ ಅರಿವು ಮೂಡಿಸಬೇಕು ಎಂದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ ಮಾತನಾಡಿ, ವಿವಿಧ ಕಾರ್ಯಕ್ರಮಗಳ ಪ್ರಗತಿ ಬಗ್ಗೆ ಮಾಹಿತಿ ನೀಡಿ, ಟ್ರಾನ್ಸ್ಜೆಂರ‍್ಸ್, ಲೈಂಗಿಕ ಕಾರ್ಯಕರ್ತರು, ಹೆಚ್‌ಐವಿ ಪೀಡಿತರಿಗೆ ಗೋಪಿಶೆಟ್ಟಿಕೊಪ್ಪ ಆಶ್ರಯ ಮನೆಗಳನ್ನು ಒದಗಿಸುವಂತೆ ಹಾಗೂ ಮಹಿಳಾ ನಿಲಯದ ದುರಸ್ತಿಗೆ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಬಿಡುಗಡೆಗೆ ಕ್ರಮ ವಹಿಸುವಂತೆ ಕೋರಿದರು.


ಸಭೆಯಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ದೃಷ್ಟಿ ಜೈಸ್ವಾಲ್, ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೊಷ್ ಕುಮಾರ್, ಜಿ.ಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಯೋಜನಾ ನಿರ್ದೇಶಕರಾದ ನಂದಿನಿ,ಡಿಹೆಚ್‌ಓ ಡಾ.ನಾಗರಾಜ್, ಡಿಡಿಪಿಯು ಪರಮೇಶ್ವರಪ್ಪ, ನಿರೂಪಣಾಧಿಕಾರಿ ಡಾ.ಸಂತೋಷ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ತಾಲ್ಲೂಕುಗಳ ಸಿಡಿಪಿಓ ಗಳು, ವಿವಿಧ ಕಾರ್ಯಕ್ರಮಗಳ ಅನುಷ್ಟಾನ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

ವರದಿ ಪ್ರಜಾ ಶಕ್ತಿ