ಕರ್ನಾಟಕ ಸರ್ಕಾರ ಮೂಡ ಹಗರಣ ಖಂಡಿಸಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ತೊಲಗಲಿ ಎಂದು ಘೋಷಣೆ ಕೂಗಿದರು.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಅವರ ಕುಟುಂಬಕ್ಕೆ ನಿಯಮ ಬಾಹಿರವಾಗಿ ನಿವೇಶನ ಹಂಚಿಕೆ ಮಾಡಿ ಸಾರ್ವಜನಿಕ ಹಿತಾಸಕ್ತಿಯನ್ನು ಸಂಪೂರ್ಣ ಮರೆತು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿರುವ ಶ್ರೀ ಸಿದ್ಧರಾಮಯ್ಯ ಅವರು ತಮ್ಮ ಎಂದಿನ ಶೈಲಿಯ ಉದ್ದಟತನ ಪ್ರದರ್ಶನ ಮಾಡದೇ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಶಿವಮೊಗ್ಗ ಜಿಲ್ಲೆ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು, ಜಿಲ್ಲೆಯ ಎಲ್ಲಾ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರುಗಳು, ಮಾಜಿ ಶಾಸಕರುಗಳು, ಮಾಜಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರು, ಮಹಾನಗರ ಪಾಲಿಕೆ ಮಾಜಿ ಸದಸ್ಯರು, ಪಕ್ಷದ ಹಿರಿಯರು, ಮುಖಂಡರು, ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ